ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ – ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 203) ತನ್ನ ಅಭ್ಯರ್ಥಿ ಆಯ್ಕೆಯಲ್ಲಿ ಬಿಜೆಪಿ ಸರಣಿ ಸಭೆಗಳನ್ನು ನಡೆಸುತ್ತಿದೆ. ಈಗಾಗಲೇ ಜಿಲ್ಲಾವರು ಕೋರ್​​ ಕಮಿಟಿ ಸಭೆಗಳ ಮೂಲಕ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (BJP Candidates List) ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ.

ಹೌದು..ಇನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ಧಾರೆ. ಇನ್ನು ಪಟ್ಟಿ  ವೈರಲ್​ ಆಗುತ್ತಿರುವುದು  ಬಿಜೆಪಿ ನಾಯಕರ ಗಮನಕ್ಕೆ ಬಂದಿದ್ದು, ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಟ್ವೀಟ್ ಮಾಡಿದ್ದು, ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುತ್ಸಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದು ಕಿಡಿಕಾರಿದ್ದಾರೆ.

ಇನ್ನು ಬಿಜೆಪಿಯ ಅಧಿಕೃತ ಖಾತೆ ಮೂಲಕ ಟ್ವೀಟ್​ ಮಾಡಲಾಗಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವೈರಲ್ ಬಗ್ಗೆ ಕಾಂಗ್ರೆಸ್​ ವಿರುದ್ಧ ಆರೋಪಿಸಲಾಗಿದೆ. ಕಾಂಗ್ರೆಸ್ ಸುಳ್ಳಿನ ಫ್ಯಾಕ್ಟರಿಯಿಂದ ಮತ್ತೊಂದು ಸುಳ್ಳು. ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಆಯ್ಕೆಯ ಪ್ರಕ್ರಿಯೆಯು ಪ್ರಗತಿಯಲ್ಲಿದ್ದು, ಈ ಪಟ್ಟಿಯು ‘FAKE’ ಆಗಿರುತ್ತದೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

Latest Indian news

Popular Stories