ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಮೌನ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನರ ಗಮನ ಸೆಳೆಯಲು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸಮರಕ್ಕೆ ಸಜ್ಜಾಗಿದೆ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಇಂದು ಬೀದಿಗಿಳಿದು ಹೋರಾಟ ಮಾಡಲು ಕೈ ಪಡೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕಾಂಗ್ರೆಸ್ ಘಟಾನುಘಟಿ ನಾಯಕರು ರಾಜಧಾನಿಯ ಬೀದಿ ಬೀದಿಗಳಲ್ಲಿ ಪ್ರತಿಭಟನೆಯ ರಣಕಹಳೆ ಮೊಳಗಿಸಲಿದ್ದಾರೆ. ಬೆಂಗಳೂರಿನ ಜ್ವಲಂತ ಸಮಸ್ಯೆಗಳಾದ ರಸ್ತೆ ಗುಂಡಿ ಹಾಗೂ ಹಗರಣಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಲಿದೆ. ಟ್ರಿನಿಟಿ ಸರ್ಕಲ್​ನಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾಗಲಿದ್ದು, ನಗರದ ಎಲ್ಲಾ ಕಡೆ ಏಕಕಾಲದಲ್ಲಿ ಕೈ ಪಡೆ ಧರಣಿ ನಡೆಸಲಿದೆ.

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪಕ್ಷ ಜ.23, ಸೋಮವಾರ ಬೆಳಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಗರದ 300ಕ್ಕೂ ಹೆಚ್ಚು ಕಡೆಗಳಲ್ಲಿ ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ ಎಂಬ ಮೌನ ಪ್ರತಿಭಟನೆ ಮಾಡಲಾಗುವುದು’ ಎಂದು ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ ಅವರ ಜತೆ ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹ್ಯಾರಿಸ್ ಅವರು, 51 ಮೆಟ್ರೋ ನಿಲ್ದಾಣಗಳಲ್ಲಿ, 26 ಫ್ಲೈ ಓವರ್, 200 ಟ್ರಾಫಿಕ್ ಸಿಗ್ನಲ್ ಗಳಲ್ಲಿ ನಾವು ಮೌನ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಗಲಾಟೆ ಮಾಡಿ, ಸಂಚಾರಕ್ಕೆ ಅಡ್ಡಿ ಮಾಡಿ ಹೋರಾಟ ಮಾಡುವುದಿಲ್ಲ. ನಮ್ಮ ಕಾರ್ಯಕರ್ತರು ಪ್ಲೆಕಾರ್ಡ್ ಹಿಡಿದು ಹೋರಾಟ ಮಾಡುತ್ತಾರೆ’ ಎಂದು ವಿವರಿಸಿದರು.

‘ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ಮಟ್ಟಿಗೆ ಹರಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಬೆಂಗಳೂರು ಉಳಿಸುತ್ತಾ ರಾಜ್ಯವನ್ನು ಉಳಿಸಿ ಎಂಬ ಸಂದೇಶ ನೀಡುತ್ತೇವೆ. ನಾಳೆ ಈ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಿ ನಂತರ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದಿದ್ದಾರೆ.

Latest Indian news

Popular Stories