ಬೆಂಗಳೂರು: ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ಮಾಡುತ್ತಿದ್ದು, ಹಾಗಾಗಿ ಕೇಂದ್ರದ ನಡೆ ಖಂಡಿಸಿ ನಾಳೆ ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡುತ್ತೇವೆ.
ನಾನು ನಗರದ ಪ್ರತಿಭಟನೆಯಲ್ಲಿ ಭಾಗಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದಲ್ಲಿ ಮಾತನಾಡಿದ ಅವರು, ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.