ಹೊಸದಿಲ್ಲಿ: ದೇಶದಲ್ಲಿ ಸಂಚಲನ ಮೂಡಿಸಿದ್ದ ವಿಮಾನದೊಳಗೆ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 30 ಲಕ್ಷ ರೂಪಾಯಿ ದಂಡ ವಿಧಿಸಿದೆ. ಅಲ್ಲದೆ ಪೈಲಟ್ ನನ್ನು ಮೂರು ತಿಂಗಳ ಕಾಲ ಅಮಾನತು ಮಾಡಲಾಗಿದೆ.
ಕಳೆದ ವರ್ಷ ನವೆಂಬರ್‌ನಲ್ಲಿ ನ್ಯೂಯಾರ್ಕ್-ನವದೆಹಲಿ ವಿಮಾನದಲ್ಲಿ ಪ್ರಯಾಣಿಕನೊಬ್ಬ ವೃದ್ಧ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗೆ ಬೆಳಕಿಗೆ ಬಂದು, ಪ್ರಯಾಣಿಕನನ್ನು ಬಂಧಿಸಲಾಗಿದೆ.
ತಮ್ಮ ನಿಯಂತ್ರಕ ಕಟ್ಟುಪಾಡುಗಳ ಉಲ್ಲಂಘನೆಗಾಗಿ ಅವರ ವಿರುದ್ಧ ಏಕೆ ಜಾರಿ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಡಿಜಿಸಿಎ ಅಕೌಂಟೆಬಲ್ ಮ್ಯಾನೇಜರ್, ಡೈರೆಕ್ಟರ್ ಇನ್ ಫ್ಲೈಟ್ ಸರ್ವಿಸಸ್, ಎಲ್ಲಾ ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಗಳಿಗೆ ಶೋಕಾಸ್ ನೋಟಿಸ್‌ಗಳನ್ನು ನೀಡಿದೆ.