ಶಿರಾಡಿಘಾಟ್ ಚತುಷ್ಪಥ ರಸ್ತೆ ನಿರ್ಮಾಣ ಮಾರ್ಚ್’ನಿಂದ ಆರಂಭ

ಬೆಂಗಳೂರು: ರಾಜಧಾನಿಯಿಂದ ಕರಾವಳಿಗೆ ಸಂಪರ್ಕ ಕಲ್ಪಿಸುವ ಶಿರಾಡಿಘಾಟಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಬರುವ ಮಾರ್ಚ್‌ನಲ್ಲಿ ಆರಂಭಗೊಳ್ಳಲಿದೆ.

ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಈಗಾಗಲೇ ಘಾಟಿ ಬಳಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಾರ್ಚ್‌ನಲ್ಲಿ ಕಾಮಗಾರಿ ಆರಂಭಿಸಲಾಗುವುದು. ಇದರ ಜತೆಗೆ ಭವಿಷ್ಯದಲ್ಲಿ ಹತ್ತು ಸಾವಿರ ಕೋಟಿ ರೂ. ಮೊತ್ತದಲ್ಲಿ ಶಾಶ್ವತ ಪರಿಹಾರಕ್ಕೆ ಸುರಂಗ ಮಾರ್ಗ ನಿರ್ಮಿಸಲು ಯೋಜನೆ ವಿನ್ಯಾಸಗೊಳಿಸಿ ಕೇಂದ್ರಕ್ಕೆ ಸಲ್ಲಿಸಲು ಸಚಿವರು ತಿಳಿಸಿದ್ದಾರೆ.

ಅದಕ್ಕೆ ಅನುಮೋದನೆ ನೀಡುವುದಾಗಿಯೂ ಭರವಸೆ ನೀಡಿದ್ದಾರೆ. ಇದಕ್ಕೆ ಸಿದ್ಧತೆಗಳನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು.

Latest Indian news

Popular Stories