ಸಂಸದರಾದ ಮೇಲೆ ಓದೋದು ಬಿಟ್ಟಿದ್ದೀರಿ;​ ನಿಮಗೆ ತಾಕತ್​ ಇದ್ದರೆ ಎಫ್​ಸಿಐ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ – ಪ್ರದೀಪ್ ಈಶ್ವರ್

ಪ್ರತಾಪ್ ಸಿಂಹ ಅವರೇ ನೀವು ಪತ್ರಕರ್ತರಾಗಿದ್ದಾಗ ಸ್ವಲ್ಪ ಓದುತ್ತಿದ್ರಿ. ಸಂಸದರಾದ ಮೇಲೆ ಓದೋದು ಬಿಟ್ಟಿದ್ದೀರಿ.​ ನಿಮಗೆ ತಾಕತ್​ ಇದ್ದರೆ ಎಫ್​ಸಿಐ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬನ್ನಿ. ವೈಯಕ್ತಿಕ ವರ್ಚಸ್ಸಿನಿಂದ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಆಗುತ್ತೇನ್ರಿ ಎಂದು ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದಾರೆ.

ಸೋಲಿನ ಭೀತಿಯಿಂದ ಪ್ರತಾಪ್ ಸಿಂಹ ಏನೇನೋ ಮಾತನಾಡುತ್ತಾರೆ. ಸಂಸದ ಪ್ರತಾಪ್​ ಸಿಂಹ ಬಾಯಿ ಮುಚ್ಚಿಕೊಂಡು ಇರಬೇಕು ಅಷ್ಟೇ ಎಂದು ಶಾಸಕ ಪ್ರದೀಪ್​ ಈಶ್ವರ್​ ವಾಗ್ದಾಳಿ ಮಾಡಿದ್ದಾರೆ. ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಬಗ್ಗೆ ವೈಯಕ್ತಿಕ ಹೇಳಿಕೆ ಕೊಡ್ತಿದ್ದಾರೆ. ವಿಷಯಾಧಾರಿತ ಬಿಟ್ಟು ವೈಯಕ್ತಿಕ ವಿಚಾರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Latest Indian news

Popular Stories