ಸಿಟಿ ರವಿ ಸವಾಲಿಗೆ ತೊಡೆ ತಟ್ಟಿದ ಸಿದ್ದು: ಕಮಿಟ್’ಮೆಂಟ್ ಪತ್ರ ಬಿಡುಗೊಳಿಸಿದ ಸಿ.ಎಮ್!

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು BJP Karnataka ನಾಯಕ C T Ravi ಸವಾಲು ಹಾಕಿದ್ದರು. ಇದಕ್ಕೆ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ

ಇಲ್ಲಿದೆ ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.

ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ Bharatiya Janata Party (BJP) ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಹೇಳಿದ್ದಾರೆ.

Latest Indian news

Popular Stories