ಮತಾಂತರ ನಿಷೇಧ ಕಾನೂನು ರದ್ಧತಿ ವಿಚಾರ: ಸಂಘಪರಿವಾರದಿಂದ ಶಾಂತಿಯುತ ಪ್ರತಿಭಟನೆಗೆ ಕರೆ

ಬೆಂಗಳೂರು: ಸಿದ್ದರಾಮಯ್ಯ(Siddaramaiah) ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Bill )ರದ್ದು, ಎಪಿಎಂಪಿ ತಿದ್ದುಪಡಿ ಕಾಯ್ದೆ ವಾಪಸಾತಿ, ಪಠ್ಯಪರಿಷ್ಕರಣೆಗೆ ಸಮ್ಮತಿ ನೀಡಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ.

ಅದರಲ್ಲೂ ಮುಖ್ಯವಾಗಿ ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಂಘಪರಿವಾರ ಸರ್ಕಾರ ವಿರುದ್ಧ ಕರ್ನಾಟಕದಾದ್ಯಂತ ಪ್ರತಿಭಟನೆಗೆ (protest) ವಿಶ್ವ ಹಿಂದೂ ಪರಿಷತ್(vishwa hindu parishad) ಕರೆ ನೀಡಿದೆ.

ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಇಂದು(ಜೂನ್ 16) ಸಂಜೆ 4 ಗಂಟೆಗೆ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲದೇ ವಿಶ್ವ ಹಿಂದೂ ಪರಿಷತ್ ಇಂದು(ಜೂನ್ 16) ರಾಜ್ಯಾದ್ಯಂತೆ ಪ್ರತಿಭಟನೆಗೆ ಮುಂದಾಗಿದ್ದು, ಕಾನೂನು ಚೌಕಟ್ಟಿನಲ್ಲಿ ಇಂದು ಸಂಜೆ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದೆ.

Latest Indian news

Popular Stories