ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ದುರ್ಮರಣ

ಲಖನೌ: ಟೈರ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮೀರತ್ ನವನ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಖಾನೆಯಲ್ಲಿ ಟೈರ್ ಕರಗಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಾಯ್ಲರ್ ಸ್ಫೋಟಕ್ಕೆ ನಿಖರ ಕರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಎಸ್ ಪಿ ದೇಹತ್ ಕಮಲೇಶ್ ಬಹದ್ದೂರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Indian news

Popular Stories