ತೆಲಂಗಾಣದ ಮುಖ್ಯಮಂತ್ರಿ ಆಯ್ಕೆಯ ಕುರಿತು ಡಿ. ಕೆ. ಶಿವಕುಮಾರ್ ಮಹತ್ವದ ಹೇಳಿಕೆ

ಹೈದರಾಬಾದ್, ಡಿ.04: ತೆಲಂಗಾಣದ ನೂತನ ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷರ ತೀರ್ಮಾನಕ್ಕೆ ಬಿಡಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಸಿಎಲ್ ಪಿ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ಅವರು ಸಿಎಂ ಆಯ್ಕೆ ತೀರ್ಮಾನವನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಿಗೆ ಬಿಡುವ ವಿಚಾರವನ್ನು ಪ್ರಸ್ತಾಪಿಸಿದರು.ಇದಕ್ಕೆ ಎಲ್ಲಾ ಶಾಸಕರು ಒಮ್ಮತದಿಂದ ಒಪ್ಪಿದರು.

ನಮಗೆ ಬೇರೆ ಪಕ್ಷಗಳ ಶಾಸಕರ ಬೆಂಬಲದ ಅಗತ್ಯವಿಲ್ಲ.ತೆಲಂಗಾಣದ ಜನ ನಮಗೆ ಸಂಪೂರ್ಣ ಬಹುಮತ ನೀಡಿದ್ದು, ನಮ್ಮ ಆಶ್ವಾಸನೆಗಳನ್ನು ಆದಷ್ಟು ಬೇಗ ಜಾರಿಗೊಳಿಸುವ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚೆ ಮಾಡಿದ್ದೇನೆ.

ನಿಮ್ಮನ್ನು ಗೇಮ್ ಚೇಂಜರ್ ಎಂದು ಪರಿಗಣಿಸಲಾಗಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಪಾಲಿಗೆ ಗೇಮ್ ಚೇಂಜರ್ ಯಾರು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಯಾವುದೇ ಗೇಮ್ ಚೇಂಜರ್ ಅಲ್ಲ. ತೆಲಂಗಾಣ ರಾಜ್ಯದ ಜನ ನಿಜವಾದ ಗೇಮ್ ಚೇಂಜರ್ ಗಳು.ಬದಲಾವಣೆ ಬಯಸಿದ ಮತದಾರರು ಹಾಗೂ ನಾಯಕರು ತೆಲಂಗಾಣದಲ್ಲಿ ಈ ಬದಲಾವಣೆ ತಂದಿದ್ದಾರೆ ಎಂದು ತಿಳಿಸಿದರು.

Latest Indian news

Popular Stories