ಕಾರ್ತಿಕ ಹುಣ್ಣಿಮೆ ದೀಪದ ಕಿಚ್ಚಿಗೆ 6 ವರ್ಷದ ಬಾಲಕಿ ಜೀವಂತ ದಹನ, ನಾಲ್ವರಿಗೆ ಗಂಭೀರ ಗಾಯ

ಹಜಾರಿಬಾಗ್,ನ.28- ಕಾರ್ತಿಕ ಹುಣ್ಣೆಮೆ ಅಂಗವಾಗಿ ಹಚ್ಚಲಾಗಿದ್ದ ಮಣ್ಣಿನ ದೀಪಗಳಿಂದ ಉಂಟಾದ ಬೆಂಕಿ ಅನಾಹುತದಲ್ಲಿ 6 ವರ್ಷದ ಬಾಲಕಿಯೊಬ್ಬಳು ಜೀವಂತವಾಗಿ ದಹಿಸಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್‍ನಲ್ಲಿ ನಡೆದಿದೆ.

ನಿನ್ನೆ ಸಂಜೆ ಕಾರ್ತಿಕ ಪೂರ್ಣಿಮೆಯ ಸಂದರ್ಭದಲ್ಲಿ ಜನರು ದಿಯಾಸ್ (ಮಣ್ಣಿನ ದೀಪಗಳು) ಹಚ್ಚಿದ್ದರು ಎನ್ನಲಾಗಿದ್ದು ಮಾರುಕಟ್ಟೆ ಪ್ರದೇಶದಲ್ಲಿನ ಖಾಸಗಿ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿತು ಮತ್ತು ತಕ್ಷಣವೇ ಪಕ್ಕದ ಕಟ್ಟಡಗಳಿಗೆ ಹರಡಿತು ಎಂದು ಹಜಾರಿಬಾಗ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರತನ್ ಚೌಥೆ ತಿಳಿಸಿದ್ದಾರೆ, ಮಧ್ಯರಾತ್ರಿಯ ನಂತರವೂ ಮುಂದುವರಿದ ಐದು ಗಂಟೆಗಳ ಕಾಲ ಶ್ರಮಿಸಿ ಬೆಂಕಿ ನಂದಿಸಲಾಯಿತು.

ಘಟನೆಯಲ್ಲಿ ಅಣ್ಣು ಎಂದು ಗುರುತಿಸಲಾದ ಆರು ವರ್ಷದ ಬಾಲಕಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories