ಗುಜರಾತ್‌ : ರಾಜ್‌ಕೋಟ್‌ನಲ್ಲಿ 3.9 ತೀವ್ರತೆಯ ಭೂಕಂಪ

ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಎಕ್ಸ್ ಪೋಸ್ಟ್‌ನಲ್ಲಿ NCS ಈ ಬಗ್ಗೆ ಮಾಹಿತಿ ನೀಡಿದ್ದು, ʻಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಭೂಮೇಲ್ಮೈಯಿಂದ 20 ಕಿಮೀ ಆಳದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

Latest Indian news

Popular Stories