
State News
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಜೆಡಿಎಸ್ ದೂರು
ಗೋಣಿಕೊಪ್ಪದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ಈಶ್ವರಪ್ಪ ವಿರುದ್ಧ ದೂರು ನೀಡಲಾಗಿದೆ.
ಒಂದು ಸಮುದಾಯದ ವಿರುದ್ಧ ಶಾಸಕ ಕೆ.ಎಸ್.ಈಶ್ವರಪ್ಪ ಅವಹೇಳನಕಾರಿ ಭಾಷಣ ಮಾಡಿದ ಆರೋಪ ಮಾಡಲಾಗಿದೆ. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕೆ.ಎಂ.ಗಣೇಶ್ ಅವರಿಂದ ಗೋಣಿಕೊಪ್ಪ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆರೋಪ-ಜೆಡಿಎಸ್ ದೂರು:
ಮಾ.11ರಂದು ಗೋಣಿಕೊಪ್ಪದಲ್ಲಿ ನಡೆದ ಬಿಜೆಪಿ ವಿಜಯಸಂಕಲ್ಪ ಯಾತ್ರೆ ಸಂದರ್ಭ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕುರಿತೂ ದೂರು ನೀಡಲಾಗಿದೆ.
ನಗರದಲ್ಲಿ ಬಿಜೆಪಿ ನಾಯಕರ ಕಟೌಟ್ ಅಳವಡಿಸುವ ಸಂದರ್ಭ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.




