ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ.
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್ ರವಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ, ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸುತ್ತಿದ್ದರು.
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಫೈಟರ್ ರವಿಗೆ ಟಿಕೆಟ್ ಪಕ್ಕ ಎಂಬ ಸಂದೇಶವನ್ನು ಸ್ವತಃ ಪಕ್ಷದ ರಾಜ್ಯಾಧ್ಯಕ್ಷರೇ ಹೇಳಿಕೆ ನೀಡಿದ್ದರು. ಆದರೆ ಇದೀಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಫೈಟರ್ ರವಿ ಬಿಜೆಪಿಯಿಂದ ಹೊರ ನಡೆದಿದ್ದಾರೆ.