ಹಾವೇರಿ ಟಿಕೆಟ್ ಕೈ ತಪ್ಪಿದರೆ ಈಶ್ವರಪ್ಪ ಬಂಡಾಯ ಸ್ಪರ್ಧೆ?

ಹಾವೇರಿ ಲೋಕಸಭಾ ಕ್ಷೇತ್ರದ(Haveri Loksabha) ಟಿಕೆಟ್​ಅನ್ನು ಪುತ್ರ ಕಾಂತೇಶ್(Kantesh) ಗೆ ಕೊಡಿಸಬೇಕೆಂದು ಮಾಜಿ ಸಚಿವ ಈಶ್ವರಪ್ಪ(KS Eshwarappa) ಕಸರತ್ತು ನಡೆಸಿದ್ದಾರೆ.

ಆದ್ರೆ, ಬಿಜೆಪಿ(BJP) ಹೈಕಮಾಂಡ್​ ಹಾವೇರಿ ಟಿಕೆಟ್​ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಕೊಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದೇ ವಿಚಾರಕ್ಕೆ ಈಶ್ವರಪ್ಪ ಅವರು ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರ ಮೇಲೆ ಮುನಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಒಂದು ವೇಳೆ ಹಾವೇರಿಯಲ್ಲಿ ಪುತ್ರನಿಗೆ ಟಿಕೆಟ್ ಕೈತಪ್ಪಿದ್ರೆ, ಖುದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಈಶ್ವರಪ್ಪ ಕಣಕ್ಕೆ ಇಳಿಯುವ ಸಾಧ್ಯತೆ ಇದೆ.

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅವರೇ ಪರೋಕ್ಷ ಸುಳಿವು ಸಹ ನೀಡಿದ್ದಾರೆ. ಇದಕ್ಕೆ ಪೂರಕವೆಂಬಂತೆ ಇಂದು(ಮಾರ್ಚ್ 13) ಈಶ್ವರಪ್ಪ ಶಿವಮೊಗ್ಗದಲ್ಲಿ ರಾಷ್ಟ್ರ ಭಕ್ತರ ಬಳಗದ ಹೆಸರಿನಲ್ಲಿ ಸಭೆ ನಡೆಸಿದ್ದು, ಈ ವೇಳೆ ಅವರ ಬೆಂಬಲಿಗರು ಬಂಡಾಯ ಸ್ಫರ್ಧೆ ಬಗ್ಗೆ ಒತ್ತಾಯಿಸುತ್ತಿದ್ದಾರೆ.

Latest Indian news

Popular Stories