ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಗಡವು ಮತ್ತೆ ವಿಸ್ತರಿಸಿದ ಸರ್ಕಾರ | ತಪ್ಪಿದರೆ ಭಾರೀ ದಂಡ!

ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಿದೆ.

ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲ. ಈ ಹಿಂದೆ ಜೂನ್ 12ರ ಗುಡುವು ಅಂತ್ಯಗೊಂಡ ನಂತರ ಜುಲೈ 4ರ ವರೆಗೆ ಅದನ್ನು ವಿಸ್ತರಿಸಿತ್ತು. ಇದೀಗ ಮಹತ್ವದ ಸಭೆ ನಡೆಸಿ ಅಂತಿಮ ಗಡುವನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಎಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಅವಕಾಶ ನೀಡಲಾಗಿದೆ. ಆದರೆ ಸೆಪ್ಟೆಂಬರ್ 16ರಿಂದ ದುಬಾರಿ ದಂಡ ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಿದ್ದೇವೆ. ಆದರೂ ಹಲವು ವಾಹನಗಳು ಇನ್ನೂ ನಂಬರ್ ಪ್ಲೇಟ್ ಅಳವಡಿಸಿಲ್ಲ. ಹೆಚ್ಚಿನ ಸಂಖ್ಯೆಯ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಬಾಕಿ ಇರುವ ಕಾರಣ ಇದೀಗ ಕೊನೆಯದಾಗಿ ಗಡುವು ವಿಸ್ತರಿಸಲಾಗುತ್ತಿದೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಗೊಳಿಸಲಾಗಿದೆ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅನ್ನು ಕಡ್ಡಾಯಾವಾಗಿ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

Latest Indian news

Popular Stories