ಹಾಸ್ಟೇಲ್ ನಲ್ಲಿ ಬಾಂಬ್ ಸ್ಫೋಟ,ಓರ್ವ ವಿದ್ಯಾರ್ಥಿ ಸ್ಥಿತಿ ಗಂಭೀರ

ಅಲಹಾಬಾದ್: ಹಾಸ್ಟೇಲ್ ಕೊಠಡಿಯೊಂದರಲ್ಲಿ ಬಾಂಬ್ ಸ್ಫೋಟಗೊಂಡು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಲಹಾಬಾದ್ ನಲ್ಲಿ ನಡೆದಿದೆ.

ಅಲಹಾಬಾದ್ ವಿಶ್ವವಿದ್ಯಾಲಯದ ಹಾಸ್ಟೇಲ್ ನಲ್ಲಿ ಈ ಅವಘಡ ಸಂಭವಿಸಿದೆ.ಪ್ರಭಾತ್ ಯಾದವ್ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದಾರೆ.ವಿದ್ಯಾರ್ಥಿ ಹಾಸ್ಟೇಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದ ಎನ್ನಲಾಗಿದೆ.ಸ್ಫೋಟಕ ವಿದ್ಯಾರ್ಥಿಯ ಕೈಯಲ್ಲಿದ್ದಾಗಲೇ ಸ್ಫೋಟಗೊಂಡಿದೆ. ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತ ಬಾಂಬ್ ನ್ನು ಯಾಕೆ ತಯಾರಿಸುತ್ತಿದ್ದ ಎಂಬುದು ತಿಳಿದುಬಂದಿಲ್ಲ. ಘಟನೆಯಲ್ಲಿ ಇನ್ನೋರ್ವ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿದ್ಯಾರ್ಥಿ ಪ್ರಭಾತ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ರಾಜೇಶ್ ಕುಮಾರ್ ಯಾದವ್ ತಿಳಿಸಿದ್ದಾರೆ.

Latest Indian news

Popular Stories