State News

ಕೇರಳದಲ್ಲಿ ಮತ್ತೆ ಕೊರೋನಾ ಹೆಚ್ಚಳ, ಇಬ್ಬರು ಸಾವು :ಲಾಕ್‌ಡೌನ್‌ ಮಾಡುವ ಸಾಧ್ಯತೆ!

ತಿರುವನಂತಪುರಂ, ಡಿಸೆಂಬರ್‌ 15: ಕೊರೋನಾ ಮತ್ತೆ ಕೇರಳದಲ್ಲಿ ಉಲ್ಬಣವಾಗಿದ್ದು,ಇಬ್ಬರು ಮೃತಪಟ್ಟಿದ್ದಾರೆ ಜನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.ಭಾರತದಲ್ಲಿ ಮೊದಲ ಪ್ರಕರಣ ಕೇರಳದಲ್ಲೇ ಕಂಡು ಬಂದಿತ್ತು.

ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ ಸಮಯದಲ್ಲಿ ಕೇರಳದಲ್ಲೂ ಕೊರೋನಾ ತ್ವರಿತ ಏರಿಕೆ ಕಂಡಿದೆ. ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ವೈರಸ್‌ಗಳ ನಿರಂತರ ಮೇಲ್ವಿಚಾರಣೆ ಮಾಡುವ ಅಗತ್ವಿದೆ ಎಂದು ತಜ್ಞರು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಕೇರಳ ಸರ್ಕಾರವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧಗಳು ಮತ್ತು ತಡೆಗಟ್ಟುವ ಕ್ರಮಗಳನ್ನು ವಿಧಿಸಬಹುದು ಎಂದು ಹೇಳಲಾಗುತ್ತಿದೆ. ಕೇವಲ ಒಂದು ತಿಂಗಳಲ್ಲಿ ಕೇರಳದಲ್ಲಿ ಸಕ್ರಿಯ ಪ್ರಕರಣಗಳು 33 ರಿಂದ 768 ಕ್ಕೆ ಏರಿಕೆಯಾಗಿದೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button