ಡಿ.16 ರಂದು ಧಾರವಾಡಕ್ಕೆ ಸಿಎಂ ಸಿದ್ದರಾಮಯ್ಯ ಆಗಮನ

ದಾರವಾಡ(ಡಿ.13): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಡಿಸೆಂಬರ್ 16 ರಂದು ಧಾರವಾಡಕ್ಕೆ ಆಗಮಿಸಿ ಸಂಜೆ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕೆಸಿಡಿ ಮೈದಾನದಲ್ಲಿ ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ.

ಡಿಸೆಂಬರ್ 16 ರಂದು ಸಂಜೆ 6 ಗಂಟೆಗೆ ಕೆಸಿಡಿ ಮೈದಾನದಲ್ಲಿ ಧಾರವಾಡ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರು ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ನೋಂದಾಯಿತ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಲ್ಯಾಪ್‍ಟ್ಯಾಪ್ ವಿತರಣೆ ಹಾಗೂ ಗಿಗ್ ಕಾರ್ಮಿಕರ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.

126 ವಿವಿಧ ಕಂಪನಿಗಳು ತಮ್ಮ ಸಿಎಸ್‍ಆರ್ ಅನುದಾನದಡಿ 525 ತ್ರಿಚಕ್ರ ವಾಹನ ಹಾಗೂ ಸಂತೋಷ್ ಲಾಡ್ ಫೌಂಡೇಶನ್‍ನಿಂದ 25 ವಾಹನಗಳನ್ನು ವಿತರಿಸಲಾಗುತ್ತಿದೆ. ತ್ರಿಚಕ್ರ ವಾಹನ ಪ್ರಾಯೋಜಿಸಿದ ಕಂಪನಿಗಳ ಪ್ರತಿನಿಧಿಗಳಿಗೂ ಸಹ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಂದ ಗೌರವ ಸಮರ್ಪಿಸಲಾಗುವುದು.

Latest Indian news

Popular Stories