ಅಯೋಧ್ಯೆ ರಾಮ ಮಂದಿರ, ಸಿಎಂ ಯೋಗಿಗೆ ಬಾಂಬ್ ಬೆದರಿಕೆ ಹಾಕಿದ ಇಬ್ಬರು ಅರೆಸ್ಟ್

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಎಸ್‌ಟಿಎಫ್ ಮುಖ್ಯಸ್ಥ ಮತ್ತು ಅಯೋಧ್ಯೆ ರಾಮಮಂದಿರಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಇಬ್ಬರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಾದ ತಹರ್ ಸಿಂಗ್ ಮತ್ತು ಓಂಪ್ರಕಾಶ್ ಮಿಶ್ರಾ ಅವರನ್ನು ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್ ಪ್ರದೇಶದಲ್ಲಿ ಬಂಧಿಸಲಾಗಿದೆ. STF ತಂಡವು ಬೆದರಿಕೆ ಇ-ಮೇಲ್ ಐಡಿ ರಚನೆಯಲ್ಲಿ ಬಳಸಲಾದ ಮೊಬೈಲ್ ಫೋನ್‌ಗಳನ್ನು ಮತ್ತು ಅವುಗಳಿಂದ ಲಾಗಿನ್ ಮಾಡಲು ಮತ್ತು ಬೆದರಿಕೆ ಇಮೇಲ್ ಕಳುಹಿಸಲು ಬಳಸುವ ವೈಫೈ ರೂಟರ್ ಅನ್ನು ಸಹ ವಶಪಡಿಸಿಕೊಂಡಿದೆ.

ಬೆದರಿಕೆ ಪೋಸ್ಟ್‌ ಗಳನ್ನು ಕಳುಹಿಸಲು ‘[email protected]’ ಮತ್ತು ‘[email protected]’ ಇಮೇಲ್ ಐಡಿಗಳನ್ನು ಬಳಸಲಾಗಿದೆ ಎಂದು ತನಿಖೆಯಲ್ಲಿ ಗೊತ್ತಾಗಿದೆ. ಬಳಸಿದ ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ. ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಕಂಡುಬಂದಿದೆ. ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಇಬ್ಬರೂ ಗೊಂಡಾ ಮೂಲದವರಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories