ಬೀದರ್ : ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಮುಖ್ಯಮಂತ್ರಿಗಳ ಘನ ಉಪಸ್ಥಿತಿಯಲ್ಲಿ ಜರುಗಲಿರುವ ಪ್ರಯುಕ್ತ ಬೀದರ ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರು ಎಸ್.ಎಸ್.ಎಲ್.ಸಿ.ಮೇಲ್ಪಟ್ಟ ಯಾವುದೇ ವಿದ್ಯಾಭ್ಯಾಸ ಮುಗಿಸಿರುವ ಎಸ್.ಎಸ್.ಎಲ್.ಸಿ., ಪಿಯುಸಿ., ಐಟಿಐ ಡಿಪ್ಲೋಮಾ, ನರ್ಸಿಂಗ್, ಯಾವುದೇ ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು https://skillconnect.kaushalkar.com ನಲ್ಲಿ ತಮ್ಮ ಇಮೇಲ್ ಐಡಿ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ತಮ್ಮ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಬೀದರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.