ಚಿಕ್ಕಮಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ – ಸಿಟಿ ರವಿ ಸ್ವಾಗತ!

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ Bharatiya Janata Party (BJP) ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಸಿ ಟಿ ರವಿ ಅವರು C T Ravi ಸ್ವಾಗತಿಸಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಶ್ರೀ ಎಂ ಕೆ ಪ್ರಾಣೇಶ್, ಜಿಲ್ಲಾಧ್ಯಕ್ಷ ಶ್ರೀ ದೇವರಾಜ್ ಶೆಟ್ಟಿ, ಮಾಜಿ ಶಾಸಕರಾದ ಶ್ರೀ ಡಿ ಎನ್ ಜೀವರಾಜ್, ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಕಲ್ಮರಡಪ್ಪ, ಶ್ರೀ ದೇವವೃಂದ ದಿನೇಶ್, ಶ್ರೀ ರವೀಂದ್ರ ಬೆಳವಾಡಿ, ಶ್ರೀ ಪುಣ್ಯಪಾಲ್ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Latest Indian news

Popular Stories