ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಹೋಗುವುದಿಲ್ಲ – ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ

ಖ್ಯಾತ ಬರಹಗಾರ, ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಾದ ಆಹ್ವಾನ ಪತ್ರಿಕೆ ವೈರಲಾಗಿತ್ತು. ಇದೀಗ ಸ್ಪಷ್ಟನೆ ನೀಡಿರುವ ಅವರು ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

FB IMG 1688119960289 State News, Featured Story

ಅವರ ಫೆಸ್ಬುಕ್ ಪೋಷ್ಟ್ ನಲ್ಲಿ, “ಈ ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ.ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ.ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ.

ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ,ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ.ಅದನ್ನೇ ಮುಂದುವರೆಸುತ್ತೇನೆ.

ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ,ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು.” ಎಂದು ಬರೆದುಕೊಂಡಿದ್ದಾರೆ.

ಇದೀಗ ಅವರ ಪೋಸ್ಟ್’ಗೆ ಬಲಪಂಥೀಯರು ವಿರೋಧ ವ್ಯಕ್ತಪಡಿಸುತ್ತಿದ್ದು ಕೆಲವರು ನಿಂದನೀಯ ಮಾತುಗಳನ್ನು ಆಡುತ್ತಿದ್ದಾರೆ.

Latest Indian news

Popular Stories