ನೇಹಾ ಕೊಲೆ ಪ್ರಕರಣ: ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಅನ್ನೋದು ಸರಿಯಲ್ಲ – ಬಿಜೆಪಿ ನಾಯಕಿ ಸುಮಲತಾ

ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಅನ್ನೋದು ಸರಿಯಲ್ಲ. ಅದೇ ರೀತಿ ಒಂದು ಸಮುದಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಕೂಡ ತಪ್ಪು. ಯುವತಿ ಹತ್ಯೆ ಬಳಿಕ ಕಾಂಗ್ರೆಸ್ ನಾಯಕರ ಹೇಳಿಕೆ ನೀಡುತ್ತಿರುವ ರೀತಿಗೆ ಸಂಸದೆ ಕಳವಳ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಕೇಸ್ ವಿಚಾರವನ್ನು ನಾನು ಗಮನಿಸಿದ್ದೇನೆ. ಹಾಡಹಗಲೇ ಯುವತಿಯ ಹತ್ಯೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಫೋಟೊ, ವಿಡಿಯೋಗಳು ಹರಿದಾಡುತ್ತಿವೆ. ಈಗಾಗಲೇ ಆಕೆ ಹತ್ಯೆ ನಡೆದುಹೋಗಿದೆ. ಇಂತ ಸಂದರ್ಭದಲ್ಲಿ ಯುವತಿಯ ಕ್ಯಾರೆಕ್ಟರ್ ಬಗ್ಗೆ ಮಾತನಾಡೋದು ಬಹಳ ನೋವಿನ ವಿಚಾರ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬೇಸರ ವ್ಯಕ್ತಪಡಿಸಿದರು.

ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಅನ್ನೋದು ಸರಿಯಲ್ಲ. ಅದೇ ರೀತಿ ಒಂದು ಸಮುದಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಕೂಡ ತಪ್ಪು. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಆರೋಪಿಯ ಎಫ್ಎಸ್ಎಲ್ ವರದಿ ಬರುವ ಮುನ್ನವೇ ಸಮರ್ಥನೆ ಮಾಡಿಕೊಂಡಿದ್ರಿ. ಈಗ ಇದು ಲವ್ ಜಿಹಾದ್ ಅಲ್ಲ ಲವ್, ವೈಯಕ್ತಿಕ ಕಾರಣಕ್ಕೆ ಆಗಿರೋ ಕೊಲೆ ಅಂತಾ ಹೇಳಿಕೆ ನೀಡಿರೋದು ತಪ್ಪು. ಸರ್ಕಾರ ಹೇಳಿಕೆ ಕೊಡುವ ಮೊದಲು ತಕ್ಷಣ ತಪ್ಪಿಸ್ಥನ ವಿರುದ್ಧ ಕ್ರಮ ಜರುಗಿಸಲಿ ಎಂದು ಆಗ್ರಹಿಸಿದರು.

Latest Indian news

Popular Stories