ಅ.7 ರಂದು ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್: ಡಿಸಿ ಟಿ.ಭೂಬಾಲನ್

IMG 20230711 WA0090 State News, INFORAMATION, Vijayapura

ವಿಜಯಪುರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯ ವಿವಿಧ 13 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಅಕ್ಟೋಬರ್ 7ರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದ ಪಿಂಚಣಿದಾರರಿಗೆ ಹಲಗಣೇಶ್ವರ ದೇವಸ್ಥಾನದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿಗಳು ಹಾಗೂ ಸಿಂದಗಿ ತಾಲೂಕಿನ ಚಟ್ಟರಕಿ ಗ್ರಾಮದ ಪಿಂಚಣಿದಾರರಿಗೆ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ ಇಂಡಿ ಉಪ ವಿಭಾಗಾಧಿಕಾರಿಗಳು ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಅದರಂತೆ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಮದಭಾವಿ ಗ್ರಾಮದ ಸಾಧುವಿನ ಕಟ್ಟಿ ಆವರಣದಲ್ಲಿ, ತಿಕೋಟಾ ಗ್ರೇಡ್-2 ತಹಶೀಲ್ದಾರ ಅವರು ಬಿಜ್ಜರಗಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ,
ಬಸವನ ಬಾಗೇವಾಡಿ ತಹಶೀಲ್ದಾರ ಅವರು ನಾಗರಾಳ ಹುಲಿ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನಿಡಗುಂದಿ ಗ್ರೇಡ್ 2 ತಹಶೀಲ್ದಾರ್ ಅವರು ಶೀಕಳವಾಡಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ, ಕೊಲ್ಹಾರ ತಹಶೀಲ್ದಾರ ಅವರು ಚಿಕ್ಕ ಗರಸಂಗಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಮುದ್ದೇಬಿಹಾಳ ಗ್ರೇಡ್ 2 ತಹಶೀಲ್ದಾರ ಅವರು ಚರ್ಚಿನಕಲ್ ಗ್ರಾಮದ ಗ್ರಾಮ ದೇವತೆ ದೇವಸ್ಥಾನದಲ್ಲಿ, ತಾಳಿಕೋಟೆ ತಹಶೀಲ್ದಾರ ಅವರು ಕಲ್ಲದೇವನ ಹಳ್ಳಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ಇಂಡಿ ಗ್ರೇಡ್ 2 ತಹಶೀಲ್ದಾರ ಅವರು ಗೊರನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಟ್ಟಡದ ಆವರಣದಲ್ಲಿ, ಚಡಚಣ ಗ್ರೇಡ್-2 ತಹಶೀಲ್ದಾರ ಅವರು ಹತ್ತಳ್ಳಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ, ದೇವರ ಹಿಪ್ಪರಗಿ ಗ್ರೇಡ್ 2 ತಹಶೀಲ್ದಾರ ಅವರು ಹಿಟ್ನಳ್ಳಿ ತಾಂಡಾ ಗ್ರಾಮ ಪಂಚಾಯತಿಯ ಸಭಾ ಭವನದಲ್ಲಿ ಹಾಗೂ ಆಲಮೇಲ ತಹಶೀಲ್ದಾರ ಅವರು ಮದರಿ ಗ್ರಾಮದ ಸರ್ಕಾರಿ ಗಂಡು ಮಕ್ಕಳ ಶಾಲೆಯಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ನಡೆಸಲಿದ್ದಾರೆ.
ನೇರ ಹಣ ವರ್ಗಾವಣೆ ಮೂಲಕ ಪಿಂಚಣಿ ಪಾವತಿಸಲು ಸರ್ಕಾರವು ತೀರ್ಮಾನಿಸಿರುವುದರಿಂದ ಪಿಂಚಣಿ ಭದ್ರತೆ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ಎನ್ ಪಿಸಿಐ ಮ್ಯಾಪಿಂಗ್ ಕಾರ್ಯವನ್ನು ಬ್ಯಾಂಕ್ ಹಾಗೂ ಅಂಚೆ ಕಚೇರಿ ಅಧಿಕಾರಿಗಳಿಂದ ತಪ್ಪದೇ ನಿರ್ವಹಿಸುವಂತೆಯೂ, ಪಿಂಚಣಿ ಅದಾಲತ್ನಲ್ಲಿ ಗ್ರಾಮಗಳ ಸಂಪೂರ್ಣ ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Latest Indian news

Popular Stories