ಬೆಂಗಳೂರು: ದೇವಾಲಯಗಳಿಗೆ ಬರುವ ತಾಯಂದಿರುಗಳಿಗೆ ತಮ್ಮ ಮಕ್ಕಳಿಗೆ ಹಾಲುಣಿಸುವ ಸಮಯದಲ್ಲಿ ಮುಜುಗರ ಉಂಟಾಗಬಾರದೆಂದು ಹಾಗೂ ತಾಯಂದಿರಿಗೆ ಸಹಕಾರಿಯಾಗಲಿ ಎಂಬ ಉದ್ದೇಶದೊಂದಿಗೆ ನಮ್ಮ ಸರ್ಕಾರ ಈ ರೀತಿಯ ಮಹತ್ವದ ತೀರ್ಮಾನ ಕೈಗೊಂಡಿದೆ.
ಶುಕ್ರವಾರ ನಗರದ ಬನಶಂಕರಿ ದೇವಾಲಯದ ಆವರಣದಲ್ಲಿ ಅಮ್ಮನಿಗೆ ಗೌರವ ಎನ್ನುವ ಹಾಲುಣಿಸುವ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದಲ್ಲಿರುವ 205 ಮುಜರಾಯಿ ದೇವಸ್ಥಾನಗಳಲ್ಲಿ ಮಕ್ಕಳಿಗೆ ಹಾಲುಣಿಸುವ ಕೇಂದ್ರಗಳನ್ನು ತೆರೆಯಲಾಗುತ್ತದೆ ಎಂದು ಸಾರಿಗೆ ಮತ್ತು ಮುಜಾರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಹಾಲುಣಿಸುವ ಕೊಠಡಿ ಮಾದರಿಯಲ್ಲೇ ರಾಜ್ಯದ ಮುಜರಾಯಿ ಇಲಾಖೆಯ ಎಲ್ಲಾ ಎ ದರ್ಜೆ ದೇವಾಲಯಗಳಲ್ಲಿ ಇಂತಹ ವ್ಯವಸ್ಥೆ ಜಾರಿಗೊಳಿಸಲು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.