ಬೆಂಗಳೂರಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟಗಳು ಸರ್ಕಾರದ ವಿರುದ್ಧ ಸಮರ ಸಾರಿವೆ.ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿ, ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸ್ತ್ರಿ ಶಕ್ತಿ ಯೋಜನೆ ಮಹಿಳೆಯರಿಗಾಗಿ ಮಾಡಿದ ಯೋಜನೆ ಇದರಿಂದ ಖಾಸಗಿಯವರಿಗೆ ನಷ್ಟವಾಗಿದೆ ಎಂದು ನಂಬಲು ಸಾಧ್ಯವಿಲ್ಲ. ಆದ್ದರಿಂದ ನಾವು ಅವರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.