ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಅರ್ಜಿ ವಜಾ

ಬೆಂಗಳೂರು: ಲಿಂಗಾಯತರ(lingayat community) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ(Siddaramaiah) ವಿರುದ್ಧ ದಾಖಲಿಸಲಾಗಿದ್ದ ಮಾನನಷ್ಟ ಮೊಕದ್ದಮೆ(Defamation case) ಅರ್ಜಿ ವಜಾಗೊಂಡಿದೆ.

ಶಂಕರ್ ಶೇಟ್ ಎಂಬುವವರು ಸಲ್ಲಿಸಿದ ಖಾಸಗಿ ದೂರನ್ನು ವಜಾ ಮಾಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್(special court) ವಜಾ ಮಾಡಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ರಾಜ್ಯದ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂದು ಹೇಳಿಕೆ ನೀಡಿದ್ದ ಸಿದ್ದರಾಮಯ್ಯ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಪ್ರೀತ್.ಜೆ ಅವರು ಮಾನನಷ್ಟ ಮೊಕದ್ದಮೆ ಅರ್ಜಿಯನ್ನು ವಜಾಗೊಳಿಸಿ ಇಂದು (ಜೂನ್ 13) ಆದೇಶ ಹೊರಡಿಸಿದ್ದಾರೆ. 

ಇದರಿಂದ ಸಿಎಂ ಸಿದ್ದರಾಮಯ್ಯನವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Latest Indian news

Popular Stories