ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಸಿದ್ದರಾಮಯ್ಯ

ಚಂದ್ರಯಾನ-3 ಯಶಸ್ಸು ಕಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ವಿಜ್ಞಾನಿಗಳಿಗೆ ಸಿಹಿಯನ್ನು ನೀಡಿ ಸಿಎಂ ಸಿದ್ದರಾಮಯ್ಯ ಅವರು ಸಂಭ್ರಮವನ್ನು ಹಂಚಿಕೊಂಡಿದ್ದಾರೆ.ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ

ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರಿಸುವ ಮೂಲಕ ಸಂತಸ ಹಂಚಿಕೊಂಡರು.

ಚಂದ್ರಯಾನ 3 ಯಶಸ್ಸಿನ ಬೆನ್ನಲ್ಲೇ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಅಭಿನಂದನೆ ಸಲ್ಲಿಸಿದ್ದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ ಎಂದಿದ್ದರು.

Latest Indian news

Popular Stories