ಸೆ.4 ರಂದು ಬರಪೀಡಿತ ತಾಲೂಕುಗಳ ಘೋಷಿಸಲಿರುವ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ರೈತಾಪಿ ವರ್ಗ ಕಂಗಾಲಾಗಿದ್ದಾರೆ. ಈ ಹಿನ್ನೆಲೆ ಸರ್ಕಾರ ತೀವ್ರವಾಗಿ ನೀರಿನ ಅಭಾವ ಇರುವ ತಾಲೂಕುಗಳನ್ನು ಬರಪೀಡಿತ ತಾಲೂಕಾಗಿ ಘೋಷಿಸಲು ಮುಂದಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಸೆ.4ರಂದು ಸಚಿವ ಸಂಪುಟ ಉಪ ಸಮಿತಿ ಸಭೆ ನಡೆಸಿ ಬರಪೀಡಿತ ತಾಲೂಕುಗಳನ್ನು ಘೋಷಿಸುತ್ತೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಸು ಹೆಚ್ಚು ಕಡಿಮೆಯಾದರೂ ಸೆಪ್ಟೆಂಬರ್ ಮೊದಲ ವಾರದಲ್ಲೇ ಬರ ಪ್ರದೇಶಗಳ ಪಟ್ಟಿ ಘೋಷಿಸುತ್ತೇವೆ. ಬರಗಾಲ ಘೋಷಣೆ ಮಾಡಿ ರೈತರಿಗೆ ಪರಿಹಾರ ಒದಗಿಸಿದರೂ, ಬೆಳೆ ವಿಮೆ ದೊರೆತರೂ ಮಳೆ ಅಭಾವದಿಂದ ರೈತ ವರ್ಗ ಸಂಕಷ್ಟಕ್ಕೆ ಸಿಲುಕಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜೂನ್ 1 ಮತ್ತು ಆಗಸ್ಟ್ 30 ರ ನಡುವೆ ನಿರೀಕ್ಷಿತ ಸಾಮಾನ್ಯ 660 ಮಿಮೀ ಮಳೆಯಾಗಬೇಕಿತ್ತು. ಆದರೆ ಕೇವಲ 446 ಮಿಮೀ ಮಳೆಯಾಗಿದೆ. ಈ ಮೂಲಕ ಶೇ 26 ರಷ್ಟು ಮಳೆ ಕೊರತೆಯಾಗಿದೆ. 29 ಜಿಲ್ಲೆಗಳಲ್ಲಿ ಆಗಸ್ಟ್ ನಲ್ಲಿ ಶೇ.70 ರಷ್ಟು ಮಳೆ ಕೊರತೆಯಾಗಿದೆ ಎಂದು ತಿಳಿಸಿದರು.

Latest Indian news

Popular Stories