ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ!

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ಮೂರು ರೂ ಹೆಚ್ಚಳ ಮಾಡಲಾಗಿದೆ.

2020 ಏಪ್ರಿಲ್‌ನಲ್ಲಿ ಹೆಚ್ಚಳವಾಗಿದ್ದ ಮಾರಾಟ ತೆರಿಗೆ 2021ರ ನವೆಂಬರ್‌ನಲ್ಲಿ ಕಡಿಮೆಯಾಗಿತ್ತು. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಮೀಸಲಿಟ್ಟಿದ್ದರಿಂದ ಇತರೆ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ನೀಗಿಸಲು ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಬರೆ ಹಾಕಿದೆ.

ಮಂಗಳೂರಿನಲ್ಲಿ 99.01 ರೂ ಇದ್ದ ಪೆಟ್ರೋಲ್ ಬೆಲೆ ಇದೀಗ 102.01ಗೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಗೆ 85.15 ರೂ ಇದ್ದ ಡೀಸೆಲ್ ಬೆಲೆ ಇದೀಗ 88.13 ರೂ ಆಗಿದೆ.

Latest Indian news

Popular Stories