ಕರ್ನಾಟಕದಲ್ಲಿ ಮುಂದಿನ ಮೂರು ದಿನ ದಾರಕಾರ ಮಳೆ:ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆ

ರಾಜ್ಯದಲ್ಲಿ ಕಳೆದ ದಿನ ಅಲ್ಲಲ್ಲಿ ಭಾರೀ ಮಳೆಯಾಗಿದೆ. ಆದರೆ ಅದ್ಯಾಕೋ ಬೆಂಗಳೂರಿನತ್ತ ಮಳೆರಾಯ ಮುಖ ಮಾಡುತ್ತಿಲ್ಲ. ಇಂದು ನಾಳೆ ಮಳೆ ಬರುತ್ತೆ ಅನ್ನೋ ಆಸೆಯಲ್ಲಿ ಜನ ಕಾದು ಕುಳಿತಿದ್ದಾರೆ. ಇದೇ ವೇಳೆ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದೆ.

ಮಳೆಗಾಗಿ ಜನ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಕಾಶವನ್ನು ನೋಡುತ್ತಾ ಕೂರುವ ಪರಿಸ್ಥಿತಿ ಎದುರಾಗಿದೆ. ಆದರೆ ಆಕಾಶದಲ್ಲಿ ಮಳೆ ಮೋಡವೇ ಕಾಣಿಸುತ್ತಿಲ್ಲ. ಸೂರ್ಯನ ಬೆಳಕು ಕಣ್ಣು ತೆರೆಯಲು ಬಿಡುತ್ತಿಲ್ಲ. ಬಿಸಿಲಿನ ಝಳಕ್ಕೆ ಜನ ಹೈರಾಣಾಗಿ ಹೋಗಿದ್ದಾರೆ. ಈ ನಡುವೆ ರಾಜ್ಯದಲ್ಲಿ ಬಿಸಿಲಿನಿಂದಾಗಿ ಕಂಗೆಟ್ಟಿರುವ ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ.

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸೂಚನೆಯನ್ನು ಐಎಂಡಿ ನೀಡಿದೆ. ಅಲ್ಲದೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

Latest Indian news

Popular Stories