State News

ಅಮಿತ್ ಶಾ ವಿರುದ್ಧ ಅಸಮಾಧಾನ ಹೊರ ಹಾಕಿದ ವಿ ಸೋಮಣ್ಣ

ತುಮಕೂರು ನ.25: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ ಸೋಮಣ್ಣ (V Somanna) ಅವರು ವರುಣ (Varuna) ಮತ್ತು ಚಾಮರಾಜನಗರದಲ್ಲಿ (Chamarajanagar) ಸ್ಪರ್ಧಿಸಿ ಸೋತಿದ್ದಾರೆ. ವಿ ಸೋಮಣ್ಣ ಅವರು ಸೋಲಿನ ಬೇಸರವನ್ನು ತುಮಕೂರು (Tumakur) ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ಹಂಚಿಕೊಂಡಿದ್ದಾರೆ.

“ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧವಾಯ್ತು. ಕೇಂದ್ರ ಗೃಹ ಅಮಿತ್ ಶಾ (Amith Shah) ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು. ಎರಡು ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ದರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ಮೋದಿಯವರು ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದರು, ಏನ್ಮಾಡಲಿ” ಎಂದು ಬೇಸರ ವ್ಯಕ್ತಪಡಿಸಿದರು. ಈ ಮೂಲಕ ತಾವು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾರಣವೇನು ಎಂಬುವುದರ ಹಿಂದಿನ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button