State News

ಅಧಿವೇಶನದಲ್ಲಿ ರೈತರ ಮತ್ತು ಜನರ ನೈಜ ಸಮಸ್ಯೆ ಗಳ ಬಗ್ಗೆ ಚರ್ಚೆಗೆ ಅಧ್ಯತೆ ಸಿಗುತ್ತಿಲ್ಲ :ವೆಲ್ಫೇರ್ ಪಾರ್ಟಿ

ಈ ಬಾರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ರಾಜ್ಯದ ಜನರ ರೈತರ ನೈಜ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಬದಲು ಅನಗತ್ಯ ವಿಷಯ ಗಳಲ್ಲಿ ಕಾಲಹರಣ ಮಾಡಲಾಗುತ್ತಿದೆ” ಎಂದು ವೆಲ್ಫೇರ್ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ. ಅವರು ಮಾತನಾಡುತ್ತಾ, ರಾಜ್ಯದಲ್ಲಿ ಮಳೆಯ ಅಭಾವದಿಂದ ಬರಪರಿಸ್ಥಿತಿ ನಿರ್ಮಾಣ ವಾಗಿದೆ. ಇದರಿಂದ ರಾಜ್ಯದ ರೈತರು ಕಂಗಲಾಗಿದ್ದಾರೆ. ಬಹಳಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.

ಅದರ ಜೊತೆಗೆ ಜನಪರ ಸಮಸ್ಯೆಗಳ ಅದರಲ್ಲೂ ಮುಖ್ಯವಾಗಿ ಉತ್ತರ ಕರ್ನಾಟಕ ದ ಜನರ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚೆಗಳು ನಡೆಯಬೇಕಾಗಿತ್ತು.ಆದರೆ ಅವ್ಯಾವುದೂ ನಡೆಯುತ್ತಿಲ್ಲ. ವಿರೋಧ ಪಕ್ಷಗಳು ಸಣ್ಣಪುಟ್ಟ ಸಮಸ್ಯೆಗಳನ್ನು ಎತ್ತಿಕೊಂಡು ಕಾಲಹರಣ ಮಾಡುತ್ತಿವೆ. ಜವಾಬ್ದಾರಿಯುತ ವಿರೋಧ ಪಕ್ಷವಾಗಿ ತನ್ನ ಕರ್ತವ್ಯ ನಿಭಾಯಿಸಿ ಜನರ ಸಮಸ್ಯೆಗಳತ್ತ ಸರಕಾರದ ಗಮನಸೆಳೆಯುವಂತೆ ಎಚ್ಚರಿಸಬೇಕಾಗಿದೆ ಎಂದೂ ಅವರು ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button