Tumakuru

ಕಂಬಳ ನೋಡಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು

ತುಮಕೂರು: ಬೆಂಗಳೂರು ಕಂಬಳ ವೀಕ್ಷಿಸಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಬೋರ್ ವೆಲ್ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾಕ್ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟದ ಫಿಲಿಪ್ಸ್ ನೇರಿ (32) ಮೃತರು.

ಕಾರಿನಲ್ಲಿದ್ದ ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button