ತುಮಕೂರಲ್ಲಿ ‘KSRTC’ ಬಸ್ ಗೆ ಬೈಕ್ ಡಿಕ್ಕಿ : ಓರ್ವ ಸಾವು ಇಬ್ಬರ ಸ್ಥಿತಿ ಗಂಭೀರ

ತುಮಕೂರು : ಕೆಎಸ್‌ಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಗೇನಹಳ್ಳಿ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್ ಬಳಿ ನಡೆದಿದೆ.

ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಅನಿಲ್ (24) ಮೃತರು. ಗಂಭೀರವಾಗಿ ಗಾಯಗೊಂಡಿದ್ದ ಚರಣ್ (22) ಮತ್ತು ಮಹೇಂದ್ರ (25) ಎಂಬ ಯುವಕರನ್ನು ಮಧುಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕೊಡಿಗೇನಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಗೌರಿಬಿದನೂರು ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಮಧುಗಿರಿ ತಾಲೂಕಿನ ಪೊಲೀಸರು ಭೇಟಿ ನೀಡಿ ಪರಿಶೀಲ ನಡೆಸುತ್ತಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Latest Indian news

Popular Stories