ತುಮಕೂರು: ನಾಳೆ ಅಯೋಧ್ಯೆ ರಾಮಮಂದಿರಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ, ಅಯೋಧ್ಯೆ ರಾಮ ಮಂದಿರ ಉದ್ಘಾಟನೆ, ರಾಮ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈ ವೇಳೆಯಲ್ಲೇ ವಿವಿಧ ರಾಜ್ಯಗಳು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿವೆ.
ಆದೇ ರೀತಿ ಕರ್ನಾಟಕದಲ್ಲೂ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಬೇಕು ಎಂಬುದು ಹಲವರ ಒತ್ತಾಯವಾಗಿತ್ತು. ಆದ್ರೇ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಇಂದು ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ ಸ್ಮೃತಿ ವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಳೆ ನಾನು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವಂತ ರಾಮ ಮಂದಿರವನ್ನು ಉದ್ಘಾಟನೆ ಮಾಡಲಿದ್ದೇನೆ. ಆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇನೆ ಎಂದರು.