ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ, ತಪ್ಪಿದ ಅನಾಹುತ

ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಬಳಿ ನಡೆದಿದೆ.

ಕಳೆದ ತಡರಾತ್ರಿ ಈ ಅಪಘಾತ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರನ್ನು ಲಾರಿಯು ಉಜ್ಜಿಕೊಂಡು ಹೋಗಿದೆ.ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.
ಅಪಘಾತದ ಬಳಿಕ ಬೇರೆ ಕಾರಿನಲ್ಲಿ ಬೆಂಗಳೂರಿಗೆ ಸಚಿವರು ತೆರಳಿದ್ದಾರೆ.

Latest Indian news

Popular Stories