ಇನ್ನೆರಡು ದಿನಗಳಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಗೃಹ ಸಚಿವ ಪರಮೇಶ್ವರ್

ತುಮಕೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್‌ ಇದೀಗ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂಬಂಧ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ

ನಮ್ಮ ಪಕ್ಷದಲ್ಲಿ ಇನ್ನೂ 21 ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕು ಎಂದರು.ನಮ್ಮ ಸರ್ಕಾರ ಕೊಟ್ಟ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಮಾಡಿದೆ. ಮಹಿಳೆಯರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಿದ್ದೇವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Latest Indian news

Popular Stories