
Tumakuru
ತುಮಕೂರು :ಸಿ. ಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್, ಶ್ರೀನಿವಾಸ್ ಎಂಬಾತನ ವಿರುದ್ಧ ಎಫ್‌ಐಆರ್
ತುಮಕೂರು (ಅ.21):ನಾಡಹಬ್ಬ ದಸರಾ ಫೊಟೊ ವಿರೂಪಗೊಳಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನ ಶ್ರೀನಿವಾಸ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಈತ ಮಹಿಷಾಸುರ ಪ್ರತಿಮೆ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯರ ಭಾವಚಿತ್ರ ಜೋಡಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದನು. ಈತನ ಪೋಸ್ಟ್ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿರುವ ಕಾಂಗ್ರೆಸ್ ವಕ್ತಾರ ಸೂರ್ಯ ಮುಕುಂದರಾಜ್. ಮಹಿಷಾಸುರ ಪ್ರತಿಮೆ ವಿರೂಪಗೊಳಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ದಕ್ಕೆ ತಂದಿದ್ದಾರೆ ಅರೆಸ್ಟ್ಸ ಮಾಡಬೇಕು ಎಂದು ಹೇಳಿದ್ದರು. ಸಧ್ಯ ಶ್ರೀನಿವಾಸ್ ಎಂಬುವವನ ವಿರುದ್ಧ ಎಫ್‌ಐಆರ್ ದಾಖಲಿಸಿಸಲಾಗಿದೆ.




