Tumkur

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ಪಾವಗಡ ಸರ್ಕಾರಿ ಪ್ರೌಢಶಾಲೆ ಪ್ರಾಂಶುಪಾಲ ಧನಂಜಯ ಹಾಗೂ ಗೌಡ್ತಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಕೃಷ್ಣ ಮೃತಪಟ್ಟವರಾಗಿದ್ದು ತೀವ್ರವಾಗಿ ಗಾಯಗೊಂಡಿರುವ ನರಸಿಂಹ ಹಾಗೂ ವೆಂಕಟಚಲಪತಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ತುಮಕೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಇವರುಗಳಿದ್ದ ಕಾರು ಪಾವಗಡ ತಾಲೂಕಿನ ಕಡವೇನಹಳ್ಳಿ ಗೇಟ್ ಬಳಿ ಪಲ್ಟಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪಾವಗಡ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Articles

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button