ತುಮಕೂರು (ಅ.02) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಇಬಿ) ಸರ್ಕಾರಿ ನೌಕರನಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವ್ಯಕ್ತಿಯ ಕುಟುಂಬವು ಸಾಲ ಭಾದೆ ತಡೆಯಲಾಗದೆ ರೈಲಿಗೆ ತಲೆಕೊಟ್ಟು ಮೃತಪಟ್ಟಿರುವ ದುರ್ಘಟನೆ ತುಮಕೂರಿನಲ್ಲಿ ನಡೆದಿದೆ.
ರೈಲಿಗೆ ಸಿಲುಕಿ ತಂದೆ, ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಗಂಗಯ್ಯ (62), ಸುನಂದಮ್ಮ ಹಾಗೂ ಅವರ ಪುತ್ರಿ ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ತುಮಕೂರಿನ ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ಈ ಘಟನೆ ನಡೆದಿದೆ. ಇವರು ತುಮಕೂರಿನ ಮರಳೂರು ನಿವಾಸಿಯಾಗಿದ್ದಾರೆ.
ರೈಲು ಸಿಕ್ಕಿದ ಪರಿಣಾಮ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹಗಳು ರವಾನೆ ಮಾಡಲಾಗಿದೆ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.