ದೇಶದ ಎಲ್ಲಾ ಆಗು ಹೋಗುಗಳಿಗೆ ಅಂಬೇಡ್ಕರ್ ರವರ ನೇತೃತ್ವದಲ್ಲಿ ರಚನೆಯಾಗಿರುವ ಸಂವಿಧಾನವೇ ಸಾಕ್ಷಿ. ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನವನ್ನು ಅರಿತುಕೊಂಡು ಭಾರತಕ್ಕೆ ಬೇಕಾದ ಶ್ರೇಷ್ಠ ಸಂವಿಧಾನವನ್ನು ರಚನೆ ಮಾಡಿದ ಕೀರ್ತಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ಸಲ್ಲುತ್ತದೆ. ಡಾ! ಬಿ. ಆರ್. ಅಂಬೇಡ್ಕರ್ ರವರ ಉನ್ನತ ಮೌಲ್ಯಗಳು, ತತ್ವಾದರ್ಶಗಳು ಸರ್ವಕಾಲಿಕ ಸತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ 133ನೇ ಜಯಂತಿ ಆಚರಣೆಯ ಅಧ್ಯಕ್ಷತೆಯನ್ನು ವಹಿಸಿ, ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪಕ್ಷದ ನಾಯಕರೊಂದಿಗೆ ಪುಷ್ಪಾರ್ಚನೆಗೈದು ಮಾತನಾಡಿದರು.
ದೀನ ದಲಿತರು, ಎಸ್ಸಿ, ಎಸ್ಟಿ ಸಮುದಾಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಕಾಂಗ್ರೆಸ್ ಅಂಬೇಡ್ಕರ್ ರವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸಿ, ಅವರ ಜೀವನದ ಕೊನೆಯ ಕ್ಷಣಗಳಲ್ಲಿ ಯಾವ ರೀತಿ ಹೀನಾಯವಾಗಿ ನಡೆಸಿಕೊಂಡಿದೆ ಎಂಬುದು ಇಂದಿಗೂ ಚರ್ಚೆಗೆ ಗ್ರಾಸವಾಗಿರುವ ವಿಚಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ರವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥಗಳ ಹೆಸರಿನಲ್ಲಿ ಅಭಿವೃದ್ಧಿಪಡಿಸಿ ವಿಶೇಷ ಗೌರವ ಸಲ್ಲಿಸಿದೆ. ಮಾತ್ರವಲ್ಲದೆ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಅಂಬೇಡ್ಕರ್ ರವರ ತತ್ವಾದರ್ಶಗಳ ಆಶಯದಂತೆ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯವನ್ನು ಒದಗಿಸಿದೆ. ಆದರೆ ಕಾಂಗ್ರೆಸ್ ಅಂಬೇಡ್ಕರ್ ರವರ ಆಶಯಗಳಿಗೆ ತಕ್ಕಂತೆ ನಡೆಯದೆ, ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಈ ಸಮುದಾಯಗಳನ್ನು ಬಳಸಿಕೊಳ್ಳುತ್ತಾ ಬಂದಿದೆ. ಬಿಜೆಪಿ ಯಾವ ರೀತಿ ಅಂಬೇಡ್ಕರ್ ರವರನ್ನು ಗೌರವಿಸಿದೆ, ಕಾಂಗ್ರೆಸ್ ಯಾವ ರೀತಿಯಲ್ಲಿ ಅವರನ್ನು ಅವಮಾನಿಸಿದೆ ಎಂಬ ವಿಚಾರಗಳನ್ನು ಸಮಾಜದಲ್ಲಿ ಪ್ರಚಲಿತಗೊಳಿಸಿದಾಗ ಕಾಂಗ್ರೆಸ್ಸಿನ ಕುಟಿಲ ನೀತಿಯ ಅಗಾಧತೆಯ ಬಗ್ಗೆ ಅರಿವು ಮೂಡಲು ಸಾಧ್ಯ ಎಂದು ಕುಯಿಲಾಡಿ ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು ರವರು ಮಾತನಾಡಿ, ಅಂಬೇಡ್ಕರ್ ರವರ ಜೀವನ ಮೌಲ್ಯಗಳು ಮತ್ತು ಸಾಧನೆಗಳ ಗುಣಗಾನಗೈದರು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ. ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಎಸ್.ಸಿ. ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಆನಂದ ಮಟಪಾಡಿ, ಉಡುಪಿ ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಕಿರಣ್ ಕಟ್ಟೆಗುಡ್ಡೆ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಉಪಾಧ್ಯಕ್ಷ ರುಡಾಲ್ಫ್ , ನಗರಸಭೆ ಮಾಜಿ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯ ಪ್ರಭಾಕರ ಪೂಜಾರಿ, ಜಿಲ್ಲಾ ಪ್ರಕೋಷ್ಠಗಳ ಪ್ರಮುಖರಾದ ಡಾ! ರಾಮಚಂದ್ರ ಕಾಮತ್, ಪಾಂಡುರಂಗ ಲಾಗ್ವಾಂಕರ್, ರವಿರಾಜ್ ಸುವರ್ಣ, ಸುದೀಪ್ ಶೆಟ್ಟಿ ನಿಟ್ಟೆ, ಚಂದ್ರಶೇಖರ್ ಪ್ರಭು ಮೊದಲಾದವರು ಉಪಸ್ಥಿತರಿದ್ದರು.