ಅಕ್ರಮ ಮರಳುಗಾರಿಕೆ ಧಕ್ಕೆಗೆದಾಳಿ : 2 ಟಿಪ್ಪರ್ ವಶ


ಉಡುಪಿ: ಕುಂದಾಪುರತಾಲೂಕು ಶಂಕರನಾರಾಯಣ ವ್ಯಾಪ್ತಿಯಭರತ್ಕಲ್ ಎಂಬಲ್ಲಿ ವಾರಾಹಿ ನದಿಯಿಂದಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬAಧಿಸಿದAತೆ ಸಾರ್ವಜನಿಕರಿಂದಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ದೂರು ಬಂದ ಹಿನ್ನೆಲೆ,ಇಲಾಖೆಯ ಹಿರಿಯ ಭೂವಿಜ್ಞಾನಿ ಸಂದೀಪ್‌ಜಿ.ಯು ಮಾರ್ಗದರ್ಶನದಲ್ಲಿ ಭೂವಿಜ್ಞಾನಿ ಸಂಧ್ಯಾಅವರುಇAದು ಮುಂಜಾನೆಕಾರ್ಯಾಚರಣೆ ನಡೆಸಿ ಮರಳು ಧಕ್ಕೆಯಲ್ಲಿದ್ದಎರಡು ಲಾರಿಗಳನ್ನು ವಶಕ್ಕೆ ಪಡೆದರು.


ಈ ಬಗ್ಗೆ ಪ್ರಕರಣದಾಖಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ವಹಿಸುವವರೆಗೆ ಮರಳು ಸಾಗಾಣಿಕೆಗೆ ಬಳಸುತ್ತಿದ್ದ ೨ ಲಾರಿ ಹಾಗೂ ೫ ಮೆಟ್ರಿಕ್‌ಟನ್ ಮರಳನ್ನು ಶಂಕರನಾರಾಯಣ ಪೊಲೀಸ್‌ಠಾಣೆವಶಕ್ಕೆ ನೀಡಲಾಗಿದೆಎಂದುಗಣಿ ಮತ್ತು ಭೂ ವಿಜ್ಞಾನಇಲಾಖೆಯ ಪ್ರಕಟಣೆ ತಿಳಿಸಿದೆ.

Latest Indian news

Popular Stories