ಉಡುಪಿ: ನಗರಾಭಿವೃದ್ಧಿ ಇಲಾಖೆಯಿಂದ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿ ಪ್ರಕಟ

ಉಡುಪಿ: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು (ಸೋಮವಾರ) ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

ಉಡುಪಿ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಕಾಪು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಜೆ ಪರಿಶಿಷ್ಟ ಜಾತಿ, ಕಾರ್ಕಳ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಕುಂದಾಪುರ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ (ಎ) ಮಹಿಳೆ ಹಾಗೂ ಬೈಂದೂರು ಪಟ್ಟಣ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲಾತಿ ಪ್ರಕಟವಾಗಿದೆ.

Latest Indian news

Popular Stories