ಉಡುಪಿ, ಫೆ.13: ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪ ಸಮೀಪ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.
ದೊಡ್ಡಣಗುಡ್ಡೆ ನಿವಾಸಿ, ಕುಂಜಿಬೆಟ್ಟು ಗ್ಯಾರೇಜ್ ಮಾಲಕ ದಾಮೋದರ ಶೆಟ್ಟಿಗಾರ್ ಮೃತ ದುದೈರ್ವಿ. ಇವರು ಫೆ.12ರಂದು ಮುಂಜಾನೆ ಕಡಿಯಾಳಿ ದೇವಸ್ಥಾನಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಫೆ.13ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ