ಉಡುಪಿ: ಅರಿಶಿನಗುಂಡಿ ಜಲಪಾತದಲ್ಲಿ ಕಾಲು ಜಾರಿ ಬಿದ್ದ ಯುವಕ

ಉಡುಪಿ, (ಜುಲೈ 24): ರೀಲ್ಸ್ (Reels) ಮಾಡಲು ಹೋಗಿ ಜಾರಿ ಜಲಪಾತಕ್ಕೆ (Water Falls) ಬಿದ್ದು ಯುವಕ ಮೃತಪಟ್ಟಿದ್ದಾನೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ.

ಅರಶಿನಗುಂಡಿ ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದ್ರಶ್ಯ ಮತ್ತೊರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಚರಣೆ ನಡೆಸುತ್ತಿದ್ದು,  ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Latest Indian news

Popular Stories