ಉಡುಪಿ: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಉಡುಪಿ, ಮಾ.1: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ರಾಜ್ಯ ಸರಕಾರಿ ನೌಕರರು ಮುಷ್ಕರದ ಉಡುಪಿ ಜಿಲ್ಲೆಯಲ್ಲೂ ನಡೆಯುತ್ತಿದ್ದು, ಜಿಲ್ಲೆಯ ಸುಮಾರು 12ಸಾವಿರ ನೌಕರರ ಪೈಕಿ ಬಹುತೇಕ ಮಂದಿ ಕರ್ತವ್ಯಕ್ಕೆ ಗೈರು ಹಾಜರಾಗಿ ಮುಷ್ಕರ ಬೆಂಬಲಿಸಿದರು.

IMG 20230301 WA0023 Udupi
IMG 20230301 WA0025 Udupi


ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ನೇತೃತ್ವದಲ್ಲಿ ಪದಾಧಿಕಾರಿಗಳು ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಆಗಮಿಸುತ್ತಿದ್ದ ಸರಕಾರಿ ನೌಕರರ ಮನವೊಲಿಸಿ ವಾಪಾಸ್ಸು ಕಳುಹಿಸಿದರು. ಆದರೆ ಹೊರಗುತ್ತಿಗೆ ನೌಕರರು ಕರ್ತವ್ಯಕ್ಕೆ ಹಾಜರಿರುವುದು ಕಂಡುಬಂತು. ಜಿಲ್ಲೆಯ ಜಿಲ್ಲಾಧಿಕಾರಿ ಸಂಕೀರ್ಣ ರಜತಾದ್ರಿ ಸೇರಿದಂತೆ ಬಹುತೇಕ ಸರಕಾರಿ ಕಚೇರಿಗಳು ನೌಕರರ ಗೈರು ಹಾಜರಿಯಿಂದ ಖಾಲಿಖಾಲಿಯಾಗಿರುವುದು ಕಂಡುಬಂತು.
ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಕೆಲವು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದುಬಂದಿದೆ.


ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಮಾತನಾಡಿ, ಆಸ್ಪತ್ರೆಯ ರೋಗಿಗಳಿಗೆ, ತುರ್ತು ಸೇವೆಯಲ್ಲಿ ಯಾವುದೇ ತೊಂದರೆ ಆಗದಂತೆ ಮುಷ್ಕರ ನಡೆಸುತ್ತಿದ್ದು, ನಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ತಿಳಿಸಿದರು. ಆರೋಗ್ಯ ತುರ್ತು ಸೇವೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ. ಹೊರಗುತ್ತಿಗೆ ನೌಕರರ ಮೂಲಕ ಕೆಲವೊಂದು ಸೇವೆಗಳನ್ನು ಒದಗಿಸುವ ಪ್ರಯತ್ನ ನಡೆಯುತ್ತಿದೆ. ಎಂದು ಡಿಸಿ ಕೂರ್ಮಾ ರಾವ್ ತಿಳಿಸಿದರು

Latest Indian news

Popular Stories