ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪ್ರಸಾದ್‌ರಾಜ್ ಕಾಂಚನ್ ಅವರು ಇಂದು ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಹೊರಟು ಪಾದಯಾತ್ರೆಯ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಸಾದ್‌ರಾಜ್ ಕಾಂಚನ್ ಅವರೊಂದಿಗೆ ಮಾಜಿ ಸಚಿವರು, ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಶ್ರೀಮತಿ ಸರಳಾ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ದಿನಾಕರ್ ಹೇರೂರು ಹಾಗೂ ನಾಯಕರಾದ ಕುಶಲ್ ಶೆಟ್ಟಿ ಹಾಗೂ ಮೈರ್ಮಾಡಿ ಅಶೋಕ್ ಶೆಟ್ಟಿ ಅವರು ಉಪಸ್ಥಿತರಿದ್ದರು.