ಉಡುಪಿ ಕಾಲೇಜಿನಲ್ಲಿ ವೀಡಿಯೋ ಚಿತ್ರೀಕರಣ ಆರೋಪ: ಸುಳ್ಳು ವೀಡಿಯೋ ಹರಡಿದ ಟ್ವೀಟರ್ ಖಾತೆಯ ವಿರುದ್ಧ ದೂರು ದಾಖಲು

ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡೀಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿರುತ್ತವೆ. ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಮಾಡಿ ಡಿಲಿಟ್ ಆದ ಬಗ್ಗೆ ಮೂವರು ವಿದ್ಯಾರ್ಥಿನಿಯರು ಮತ್ತು ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಕೃತ್ಯ, ವ್ಯಕ್ತಿಯ ಖಾಸಗಿ ಚಿತ್ರವನ್ನು ಚಿತ್ರೀಕರಿಸುವ ಕೃತ್ಯ, ಮಾಹಿತಿಯನ್ನು ಮತ್ತು ದಸ್ತಾವೇಜನ್ನು ಹಾಜರುಪಡಿಸಲು ತಪ್ಪುವ ಕೃತ್ಯದ ಅಡಿಯಲ್ಲಿ ಮಲ್ಪೆ ಠಾಣಾ ಪಿಎಸ್‌ಐರವರು ಸ್ವಯಂ ಪ್ರೇರಿತವಾಗಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.

ಈ ಘಟನೆಗೆ ಸಂಬಂಧಿಸಿದಂತೆ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಮೂಲಕ ವಿಡಿಯೋ ಚಿತ್ರೀಕರಿಸಿ ಪಾರ್ವರ್ಡ್ ಮಾಡಿರುತ್ತಾರೆ ಎಂದು ಎಡಿಟ್ ಮಾಡಿದ ವಿಡಿಯೋ One India Kannadaಯೂ-ಟ್ಯೂಬ್ ಚಾನಲ್‌ನಲ್ಲಿ ಅಪ್ಲೋಡ್ ಆಗಿದ್ದು ಅದನ್ನು ಕಾಲು ಸಿಂಗ್ ಚೌಹಾಣ್ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿ ಆಕ್ಷೇಪಾರ್ಹ ಸುಳ್ಳುಸುದ್ದಿ ಹಬ್ಬಿಸುತ್ತಿರುವುದು ಕಂಡು ಬಂದಿರುವುದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಕೋಮು ದ್ವೇಷ ಉಂಟು ಮಾಡಿ ಸೌಹಾರ್ಧತೆಗೆ ಭಾದಕವಾಗುವ ಕೃತ್ಯದ ಅಡಿಯಲ್ಲಿ
ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ಸ್ವಯಂಪ್ರೇರಿತ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Latest Indian news

Popular Stories